Posts

Showing posts from October 3, 2021

ಆಗಸ್ಟ್‌ 7ರಿಂದ ಮಂಗಳೂರು ದಸರಾ ಉತ್ಸವ

Image
*ಅ.7ರಿಂದ ಮಂಗಳೂರು ದಸರಾ ಉತ್ಸವ* ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ  ಈ ವರ್ಷದ ಮಂಗಳೂರು ದಸರಾ ಮಹೋತ್ಸವ  ಅ. 7 ರಿಂದ 16 ರ ವರೆಗೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ ‘ನಮ್ಮ ದಸರಾ- ನಮ್ಮ ಸುರಕ್ಷೆ’  ಘೋಷ ವಾಕ್ಯದಡಿ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುದ್ರೋಳಿ ಕ್ಷೇತ್ರದಲ್ಲಿ  ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಸರಾವನ್ನು ಸರಕಾರದ ಮಾರ್ಗಸೂಚಿ ಪ್ರಕಾರ ನಡೆಸುವಂತೆ ಜಿಲ್ಲಾಧಿಕಾರಿಗಳು ಕ್ಷೇತ್ರಾಡಳಿತ ಮಂಡಳಿಯ ಸದಸ್ಯರಿಗೆ ಸಲಹೆ ನೀಡಿದ್ದು, ಅದರಂತೆ ಈ ಬಾರಿಯ ಎಲ್ಲ ಉತ್ಸವಗಳು ನಡೆಯಲಿದೆ. ಶಾರದಾ ಮೂರ್ತಿಯ ವಿಸರ್ಜನೆಯಂದು ದಸರಾ ಮೆರವಣಿಗೆ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳು ಯಥಾವತ್ತಾಗಿ ನೆರವೇರಲಿದೆ ಎಂದರು. *ವರ್ಚುವಲ್ ಸಾಂಸ್ಕೃತಿಕ ವೈಭವ:* ಮಂಗಳೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಚುವಲ್ ಮಾದರಿಯಲ್ಲಿ  ನಡೆಸಲಾಗುತ್ತಿದ್ದು, ಸ್ಥಳೀಯ ಟಿವಿ ಚಾನೆಲ್‌ಗಳ ಮೂಲಕ  ನೇರ ಪ್ರಸಾರವಾಗಲಿದೆ ಎಂದು ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ