Posts

Showing posts from April 14, 2024

ಸರ್ವ ಮನುಕುಲದ ವಿಶ್ವಶಕ್ತಿ ಭಗವಾನ್ ಶ್ರೀ ನಾರಾಯಣ ಗುರು

Image
ನಾರಾಯಣ ಗುರುಗಳಿಗೆ ಮಾಲಾರ್ಪಣೆಗೂ ಮುನ್ನ ಮೋದಿ ಉತ್ತರಿಸಬೇಕಿರುವುದು..! - ನವೀನ್ ಸೂರಿಂಜೆ ಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು. 2022 ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಪ್ರಸ್ತಾಪವನ್ನು ಕಳಿಸಿತ್ತು. ಆದರೆ ಕೇಂದ್ರ ಸರ್ಕಾರವು ನಾರಾಯಣ ಗುರುಗಳ ಸ್ಥಬ್ದ ಚಿತ್ರವನ್ನು ಪೆರೇಡ್ ನಿಂದ ಹೊರ ಹಾಕಿತ್ತು‌.  "ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು" ಎಂಬುವುದು ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿದ ತತ್ವವಾಗಿದೆ. ನಾರಾಯಣ ಗುರುಗಳು ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಕೇರಳದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಈಳವ ಸಮುದಾಯದಲ್ಲಿ ಹುಟ್ಟಿದ ನಾರಾಯಣ ಗುರುಗಳು ಸಮಾಜದ ಸುಧಾರಕರಾಗಿ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ನಾರಾಯಣ ಗುರುಗಳು ಮಂಗಳೂರಿಗೂ ಆಗಮಿಸಿ ಮಂಗಳೂರಿನಲ್ಲೂ ಅಸ್ಪೃಶ್ಯತೆಯ ವಿರುದ್ಧ ಕ್ರಾಂತಿ ಮಾಡಿದರು. ಕೇರಳದ ಈಳವರಂತೆ ಮಂಗಳೂರಿನ ಬಿಲ್ಲವ ಸಮುದಾಯ ಕೂಡಾ ನಾ