Posts

Showing posts from December 1, 2024

ಶ್ರೀ ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ.....!!!

Image
ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ! బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ. ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯಾ...